ಕುಂದಾಪುರ (ಸೆ,18): ಬಿ.ಜೆ.ಪಿ ಕುಂದಾಪುರ ಮಂಡಲದ ವ್ಯಾಪ್ತಿಯಲ್ಲಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಸಪ್ಟೆಂಬರ್,18 ರಂದು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಡಳಿ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು.

ಕುಂದಾಪುರ ಪುರಸಭೆ ವ್ಯಾಪ್ತಿಯ ಸಂಗಮ್ ವಾರ್ಡ್, ಮಂಗಳೂರು ಟೈಲ್ಸ್ ಪ್ಯಾಕ್ಟರಿ ವಾರ್ಡ್, ಬಹದ್ದೂರ್ ಷಾ ವಾರ್ಡ್ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ, ಕಾರ್ಯದರ್ಶಿ ಸುರೇಂದ್ರ ಸಂಗಮ್, ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್, ಉಪಾಧ್ಯಕ್ಷ ಸಂದೀಪ್ ಖಾರ್ವಿ, ನಗರ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಪೂಜಾರಿ, ರೈತ ಮೋರ್ಚಾ ಅಧ್ಯಕ್ಷ ಸುನೀಲ್ ಶೆಟ್ಟಿ, ಹಿಂದುಳಿದ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸುದೀರ್ ಕೆ.ಎಸ್, ಮಂಡಲ ಹಿ.ವ.ಮೋರ್ಚಾ ಪ್ರಧಾನ ಕಾರ್ಯದರ್ಶಿ ಜೀವನ್ ಅಂಕದಕಟ್ಟೆ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನೀಲ್ ಖಾರ್ವಿ, ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಪುರಸಭೆ ಸದಸ್ಯರಾದ ಸಂತೋಷ್ ಶೆಟ್ಟಿ, ವನಿತಾ ಬಿಲ್ಲವ, ಶ್ವೇತಾ ಸಂತೋಷ್, ರಾಘವೇಂದ್ರ ಖಾರ್ವಿ, ಸ್ಥಾಯಿ ಸಮಿತಿ ಅಧ್ಯಕ್ಷ ಶೇಖರ್ ಪೂಜಾರಿ, ನಾಮನಿರ್ದೇಶಿತ ಸದಸ್ಯರಾದ ದಿವಾಕರ್ ಕಡ್ಗಿ ಹಾಗೂ ಪಕ್ಷದ ಮುಖಂಡರು, ಪಧಾದಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.











