ಶಿವಮೊಗ್ಗ(ಸೆ,27): ನಗರದ ಸಹ್ಯಾದ್ರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಕುಂದಾಪುರ ಮೂಲದ ಡಾ.ಶುಭಾ ಮರವಂತೆ ಯವರನ್ನು ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ವೆಂಕಟೇಶಪ್ಪ, ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ದೈನಂದಿನ ಕಾರ್ಯಚಟುವಟಿಕೆಗಳ ಹಾಗೂ ಕಾರ್ಯಕ್ರಮಗಳ ಅನುಷ್ಠಾನಗಳ ದೃಷ್ಠಿಯಿಂದ ಕಾರ್ಯಾನುಷ್ಠಾನ ಮಂಡಳಿಗೆ ಇವರನ್ನು ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿರುತ್ತಾರೆ .