ಕುಂದಾಪುರ (ಸೆ,28): ಇನ್ಸ್ಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವ 11 ವಿದ್ಯಾರ್ಥಿಗಳು ಸಿಎ ಫೌಂಡೇಶನ್ನ ಪರೀಕ್ಷೆ ತೇರ್ಗಡೆ ಹೊಂದಿದ್ದಾರೆ.
ಅವರನ್ನು ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಹಾಗೂ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಪ್ರೊ. ಕರುಣಾಕರ ಕೊಟೇಗಾರ್ ಸಮ್ಮಾನಿಸಿ ಗೌರವಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಪ್ರಭಾ ಅಕಾಡೆಮಿಯ ಮುಖ್ಯಸ್ಥರಾದ ಭರತ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಆಂತರಿಕ ಗುಣಮಟ್ಟ ಭರವಸೆಯ ಕೋಶದ (ಐಕ್ಯೂಎಸಿ) ಕೋ-ಆರ್ಡಿನೇಟರ್ ಅವಿತಾ ಕೊರೆಯಾ ಉಪಸ್ಥಿತರಿದ್ದರು.
ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳು ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಿಎ/ಸಿಎಸ್ ತರಬೇತಿ ಸಂಸ್ಥೆಯ ವತಿಯಿಂದ ತರಬೇತಿ ಪಡೆಯುತ್ತಿದ್ದಾರೆ. ಕನ್ನಡ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ನಿರೂಪಿಸಿ, ವಂದಿಸಿದರು.