ಉಡುಪಿ(ಸೆ,29); ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ನೆಹರೂ ಯುವ ಕೇಂದ್ರ ಉಡುಪಿ, ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಓಟ ಹಾಗೂ ಫಿಟ್ ಇಂಡಿಯಾ ಓಟ ಆಯೋಜಿಸಲಾಗಿತ್ತು.
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬರವರು ಓಟಕ್ಕೆ ಚಾಲನೆ ನೀಡಿದರು.
ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ. ಗಣನಾಥ ಎಕ್ಕಾರ ರವರು ಭಾರತದ ಸ್ವಾತಂತ್ರೋತ್ತರ ಅಭಿವೃದ್ಧಿಯ ಮಹತ್ವವನ್ನು ತಿಳಿಸಿದರು. ನೆಹರು ಯುವ ಕೇಂದ್ರದ ಹರೀಶ್ ಕೋಟ್ಯಾನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪದವಿ ಹಾಗೂ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.