ಕೋಟ (ಅ, 01) : ಗೀತಾನಂದ ಫೌಂಡೇಷನ್(ರಿ) ಕೋಟ ಇದರ ಆಶ್ರಯದಲ್ಲಿ ಸ್ಥಳೀಯ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕೋಟ ಪಡುಕರೆ ಸಂಯುಕ್ತ ಪ್ರೌಢ ಶಾಲೆಯಲ್ಲಿ ಉಚಿತ ನೋಟ್ ಪ್ರಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಅಂಗವಿಕಲರಿಗೆ ಸೈಕಲ್ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೀತಾನಂದ ಫೌಂಡೇಷನ್ ಪ್ರವರ್ತಕರು ಉದ್ಯಮಿ, ಕೊಡುಗೈದಾನಿ ಶ್ರೀ ಆನಂದ ಸಿ .ಕುಂದರ್ ವಹಿಸಿದ್ದರು. ನಮ್ಮ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಬಡಜನರಿಗೆ ನಿರಂತರವಾಗಿ ಸಹಾಯ ನೀಡುತ್ತ ಬಂದಿದೆ. ಸಮಾಜಪರ ಕಾರ್ಯಗಳಿಂದ ಮನಸ್ಸಿಗೆ ತೃಪ್ತಿ ದೊರೆಯುತ್ತದೆ ಎಂದರು ಆನಂದ ಸಿ .ಕುಂದರ್ ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ, ಪಿ.ವಿ ಆನಂದ ಸಾಲಿಗ್ರಾಮ ರವರನ್ನು ಟ್ರಸ್ಟ್ ವತಿಯಿಂದ ಸಮ್ಮಾನಿಸಲಾಯಿತು. ಸ್ಥಳೀಯ ಭಾಗದ ಸರಿಸುಮಾರು 18 ಶಾಲೆಗಳ ಮೂರು ಸಾವಿರ ವಿದ್ಯಾರ್ಥಿಗಳಿಗೆ 4.5 ಲಕ್ಷ ರೂ. ಮೌಲ್ಯದ ನೋಟ್ ಬುಕ್ ನ್ನು ವಿತರಿಸುವುದರ ಜೊತೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ 37 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಲಕ್ಷ್ಮೀ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಜು ಪಡುಕರೆ, ಕೋಟ ಇದರ ಪ್ರಾಂಶುಪಾಲರಾದ ನಿತ್ಯಾನಂದ ಗಾಂವ್ಕರ್, ಮನೋವೈದ್ಯ ಡಾ| ಪ್ರಕಾಶ್ ತೋಳಾರ್, ಕೋಟ ಗ್ರಾ.ಪಂ. ಅಧ್ಯಕ್ಷ ಅಜಿತ್ ದೇವಾಡಿಗ, ಜಿಲ್ಲಾ ಪ್ರೌಢ ಶಾಲೆ ಸರ್ಕಾರಿ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ, ಫೌಂಡೇಶನ್ ನ ಶ್ರೀಮತಿ ಗೀತಾ.ಸಿ ಕುಂದರ್, ಮುಖ್ಯ ಶಿಕ್ಷಕ ನಿರಂಜನ್ ನಾಯಕ್, ಜಯಂತಿ ಉಪಸ್ಥಿತರಿದ್ದರು. ಶಿಕ್ಷಕ ಶ್ರೀಧರ ಶಾಸ್ತ್ರೀ ಸನ್ಮಾನಪತ್ರ ವಾಚಿಸಿದರು. ಶ್ರೀನಿವಾಸ ಕುಂದರ್ ವಂದಿಸಿದರು, ರವಿಕಿರಣ್ ಕಾರ್ಯಕ್ರಮ ನಿರೂಪಿಸಿದರು.