ಕುಂದಾಪುರ (ಅ, 06) : ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿಗೆ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ರವರು ಅಕ್ಟೋಬರ್,06 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಚಿವರು ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪರಿಚಯ ದೃಶ್ಯಿಕೆಯನ್ನು ಬಿಡುಗಡೆಗೊಳಿಸಿದರು.
ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು, ಬೈಂದೂರಿನ ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಉಪನ್ಯಾಸಕರಾದ ರಕ್ಷಿತ್ ರಾವ್, ಶಿವರಾಜ್ ಸಿ., ಪ್ರವೀಣ್ ಗಂಗೊಳ್ಳಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್, ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ನೈಕಂಬ್ಳಿ ಹಾಗೂ ಭೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಸ್ಥೆಯ ವತಿಯಿಂದ ಸಚಿವರನ್ನು ಗೌರವಿಸಿ ಸಮ್ಮಾನಿಸಲಾಯಿತು.