ಕುಂದಾಪುರ (ಅ,14): ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಮೂಡುಬಿದರಿ ಇದರ ಆಡಳಿತಕ್ಕೆ ಒಳಪಟ್ಟ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಸುಣ್ಣಾರಿ, ಕುಂದಾಪುರ ಇದರ ವಿದ್ಯಾರ್ಥಿಗಳು ರಾಜ್ಯ ಮಟ್ಟದ “ಯುವ ದಸರಾ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ಬೆಳ್ಳಿ ಪದಕ ಪಡೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಮಹಾನಗರ ಪಾಲಿಕೆ ವತಿಯಿಂದ ಆಚರಿಸಿದ 2021ನೇ ಸಾಲಿನ ದಸರಾ ಹಬ್ಬದ ಪ್ರಯುಕ್ತ “ಯುವ ದಸರಾ -2021ರ” ವತಿಯಿಂದ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ನಿರ್ದೇಶನದ ಅನ್ವಯ ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ “ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಎಕ್ಸಲೆಂಟ್ ಪದವಿಪೂರ್ವ ಕಾಲೇಜು ಕುಂದಾಪರ, ಇಲ್ಲಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಹೆಮ್ಮೆಯ ವಿದ್ಯಾರ್ಥಿಗಳಾದ ಸುಜನ್ ಶೆಟ್ಟಿ ಪ್ರಥಮ ಸ್ಥಾನ, ಆಯುಷ್ ಪುತ್ರನ್ ದ್ವಿತೀಯ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.