ಕುಂದಾಪುರ (ಅ,17): ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ(ರಿ) ಇದರಕುಂದಾಪುರ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಗೌರವಾಧ್ಯಕ್ಷರಾದ ಉದಯ ಬಳ್ಕೂರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ ಇದರ ಆಂಗ್ಲ ಭಾಷಾ ಉಪನ್ಯಾಸಕ ನಾಗರಾಜ್ ಹೆಮ್ಮಾಡಿ ಮತ್ತು ಪ್ರಧಾನ ಕಾರ್ಯದರ್ಶಿಗಳಾಗಿ ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜು ಕುಂದಾಪುರ ಇದರ ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿಬಿ ಆಯ್ಕೆಯಾಗಿದ್ದಾರೆ.