ಶಿರ್ವ(ಅ,21): ಕಾಪು-ಶಿರ್ವ ರಸ್ತೆಯ ಶಾಂತಿಗುಡ್ಡೆ ಎಂಬಲ್ಲಿ ಸಾರ್ವಜನಿಕರು ಘನ ಮತ್ತು ದ್ರವ ತ್ಯಾಜ್ಯಗಳು ಹಾಗು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಮನ ಬಂದಂತೆ ರಸ್ತೆ ಬದಿಗೆ ಎಸೆಯುವುದರಿಂದ ಪರಿಸರದ ದನಕರುಗಳಿಗೆ ಮತ್ತು ಜನರಿಗೆ ತೊಂದರೆ ಉಂಟಾಗುವುದರೊಂದಿಗೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳಿವೆ.
ಸುತ್ತ-ಮುತ್ತ ದಿನನಿತ್ಯ ಒಡಾಡುವ ನಾಗರಿಕರಿಗೆ ಕೆಟ್ಟ ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡೇ ಹೋಗ ಬೇಕಾದ ಪರಿಸ್ಥಿತಿ ಬಂದೊದಗಿದೆ. ಸುತ್ತಲ ಫಲಪತ್ತೆಯ ಭೂಮಿ ತ್ಯಾಜ ಮತ್ತು ಪ್ಲಾಸ್ಟಿಕ್ ನಿಂದ ತುಂಬಿದೆ. ಇದಕ್ಕೆ ಸಂಬಂದ ಪಟ್ಟವರು ಸೂಕ್ತ ಕ್ರಮ ಕೈಗೊಂಡು ಪರಿಸರ ಮಾಲಿನ್ಯ ತಡೆಗಟುವಲ್ಲಿ ಸಹಾಯವಾಗಬಹುದು.
ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್, ಊಪನ್ಯಾಸಕರು, ಸಂತ ಮೇರಿ ಕಾಲೇಜು, ಶಿರ್ವ