ಬೈಂದೂರು (ಅ,23): ಬೈಂದೂರು ಸರ್ಕಾರಿ ಐಟಿಐ ಕಾಲೇಜನ್ನು ಟಾಟಾ ಸಂಸ್ಥೆಯ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಮಟ್ಟಕ್ಕೆ ಉನ್ನತೀಕರಿಸುವ ಕಾಮಗಾರಿಗಳು ನಡೆಯುತ್ತಿದ್ದು, ಉನ್ನತ ಶಿಕ್ಷಣ,ಕೌಶಲ್ಯಾಭಿವೃದ್ಧಿ ,ಐಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್ ನಾರಾಯಣ ಅ,23 ರಂದು ಬೈಂದೂರು ಸರಕಾರಿ ಐ.ಟಿ.ಐ ಕಾಲೇಜಿಗೆ ಭೇಟಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು.
ನೂತನ 11 ಕೋರ್ಸ್ಗಳು ಆರಂಭವಾಗಲಿದ್ದು, ಅವುಗಳಲ್ಲಿ ಆರು ವಿಷಯಗಳು ಎರಡು ವರ್ಷ ಹಾಗೂ ಐದು ವಿಷಯಗಳು ಒಂದು ವರ್ಷದ ಅವಧಿಯದ್ದಾಗಿದೆ ಎಂದು ತಿಳಿಸಿದರು.ಈ ಸಂಧರ್ಭದಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.