ವಂಡ್ಸೆ(ಅ,27): 66 ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಾತಾಡ್ ಮಾತಾಡ್ ಕನ್ನಡ ಕನ್ನಡಕ್ಕಾಗಿ ನಾವು ಅಭಿಯಾನ ಕೆರಾಡಿಯ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ಅ,28 ರಂದು ನಡೆಯಿತು.
ಕನ್ನಡ ವಿಭಾಗದ ಮುಖ್ಯಸ್ಥರಾದ ಅರುಣ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆಂಗ್ಲಭಾಷ ಉಪನ್ಯಾಸಕ ನಾಗರಾಜ್ ಹೆಮ್ಮಾಡಿ ಪ್ರಾಸ್ತವಿಕ ಮಾತನಾಡಿದರು. ಉಪನ್ಯಾಸಕ ಸುಕೇಶ್ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕ ಅಭಿಜಿತ್ ಹೆಮ್ಮಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.