ಬಂಟಕಲ್(ಅ,30): ಇಲ್ಲಿನ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಇದರ 8ನೇ ವರ್ಷದ ಪದವಿ ಪ್ರದಾನ ಸಮಾರಂಭವು ನ, 07 ರ ಭಾನುವಾರದಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.
ಕಾರ್ಯಕ್ರಮದಲ್ಲಿ 2020-21ರ ಶೈಕ್ಷಣಿಕ ವರ್ಷದಲ್ಲಿ ಅಂತಿಮ ವರ್ಷದ ಬಿ.ಇ. ಪದವಿ ಪೂರೈಸಿದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ನೀಡಲಾಗುವುದು. ಇದೇ ಸಂದರ್ಭದಲ್ಲಿ ಪ್ರತಿ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಿಗೆ ಚಿನ್ನದ ಪದಕವನ್ನು ನೀಡಲಾಗುವುದು.
ಶ್ರೀ ರಾಮ ನಾಯಕ್, ಜನರಲ್ ಮ್ಯಾನೇಜರ್, ಕೆನರಾ ಬ್ಯಾಂಕ್, ಮಣಿಪಾಲ ಮತ್ತು ಡಾ. ನಾರಾಯಣ್ ಸಭಾಹಿತ್, ಕುಲಸಚಿವರು, ಮಣಿಪಾಲ ಮಹಾವಿದ್ಯಾಲಯ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪದವಿ ಪ್ರದಾನ ಸಮಾರಂಭದ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಶ್ರೀ ಸೋದೆ ವಾದಿರಾಜ ಮಠ, ಉಡುಪಿ ಇವರು ವಹಿಸಲಿದ್ದಾರೆ
ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.