ಬಸ್ರೂರು (ನ, 01) : ಇಲ್ಲಿನ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅರ್ಥಶಾಸ್ತ್ರ ಉಪನ್ಯಾಸಕ ,ಪ್ರಸಿದ್ಧ ನಿರೂಪಕ, ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಲಯನ್ ಅಕ್ಷಯ ಹೆಗ್ಡೆ ಮೊಳಹಳ್ಳಿ
ಧ್ವಜರೋಹಣಗೈದು ಕನ್ನಡ ನಾಡು, ನುಡಿ, ಸಂಸ್ಕೃತಿ ಆಚಾರ ವಿಚಾರಗಳ ಬಗ್ಗೆ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಅರುಣ್ ಕುಮಾರ್ ಶೆಟ್ಟಿ , ಆಡಳಿತ ಮಂಡಳಿಯ ಮೊಸೆಸ್ ಮನೋಹರ್, ಜುನೈದ್, ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.












