ಕುಂದಾಪುರ(ನ,2): ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ನ,2 ರಂದು ಸಂಗಮ್ ಬಸ್ ನಿಲ್ದಾಣದಿಂದ ಕಾಲೇಜ್ ಕ್ಯಾಂಪಸ್ ತನಕ ಶ್ರಮದಾನ- ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಎನ್.ಎಸ್.ಎಸ್ ಸ್ವಯಂಸೇವಕರು ಸಕ್ರಿಯವಾಗಿ ಶ್ರಮದಾನ- ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗಿಯಾದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್.ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ, ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್.ಟಿ.ಎನ್, ಉಪನ್ಯಾಸಕರಾದ ಸುಧಾಕರ್ ಪಾರಂಪಳ್ಳಿ, ಸುಕುಮಾರ ಶೆಟ್ಟಿ ಕಮಲಶಿಲೆ, ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜಶೆಟ್ಟಿ ನೈಕಂಬ್ಳಿ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿ ನಾಯಕಿ ಸುಷ್ಮಾ ಶೆಟ್ಟಿ ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.














