ಕುಂದಾಪುರ (ನ 2): ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾತಂತ್ರ್ಯ ಭಾರತದ ಪ್ರಥಮ ಗ್ರಹ ಸಚಿವ,ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಜನ್ಮ ದಿನಾಚರಣೆ ಸಲುವಾಗಿ ರಾಷ್ಟ್ರೀಯ ಏಕತಾ ದಿವಸ್ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದು, ಎನ್.ಎಸ್.ಎಸ್.ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಎನ್.ಎಸ್.ಎಸ್. ಘಟಕದ ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್.ಟಿ.ಎನ್, ಕನ್ನಡ ಉಪನ್ಯಾಸಕ ಸುಕುಮಾರ ಶೆಟ್ಟಿ ಕಮಲಶಿಲೆ, ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜಶೆಟ್ಟಿ ನೈಕಂಬ್ಳಿ, ಕಾಲೇಜಿನ ಎನ್.ಎಸ್.ಎಸ್ ಘಟಕದ ಸ್ವಯಂಸೇವಕರು ಹಾಗೂ ಕಾಲೇಜಿನ ಬೋಧಕ,ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.