ಕುಂದಾಪುರ (ನ,10): ಕರ್ನಾಟಕದ ಪ್ರಸಿದ್ಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ಬೆಂಗಳೂರಿನ ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಇದರ ನಿರ್ದೇಶಕರಾದ ಶ್ರೀ ಉಪೇಂದ್ರ ಶೆಟ್ಟಿಯವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಉಪಯುಕ್ತ ಮಾಹಿತಿಯುಳ್ಳ ಸರಿಸುಮಾರು ಮೂವತ್ತು ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಹಾಗೂ ಗ್ರಂಥಪಾಲಕರಾದ ಮಹೇಶ್ ಬಾಬು ಉಪಸ್ಥಿತರಿದ್ದರು.














