ಕೆರಾಡಿ(ನ,15): ಕೆರಾಡಿಯ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ ನ,10 ರಂದು ಕಾನೂನು ಅರಿವು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾಲೇಜಿನ ಸಂಸ್ಥಾಪಕ ಹಾಗೂ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಇದರ ಧರ್ಮದರ್ಶಿಗಳಾದ ಕೆರಾಡಿ ಚಂದ್ರಶೇಖರ ಶೆಟ್ಟಿ ಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಂಪಾರು ಇದರ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಪ್ರಾಸ್ತವಿಕ ಮಾತುಗಳನ್ನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೊಲ್ಲೂರು ಠಾಣಾಧಿಕಾರಿ ಶ್ರೀ ನಾಸಿರ್ ಹುಸೇನ್ ಮಾದಕ ವಸ್ತುಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.ಇನ್ನೊರ್ವ ಸಂಪನ್ಮೂಲ ವ್ಯಕ್ತಿ, ವಕೀಲರು ಉಮೇಶ್ ಶೆಟ್ಟಿ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ನೀಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ಆರ್ ಅತಿಥಿಗಳನ್ನು ಸ್ವಾಗತಿಸಿ, ಧನ್ಯವಾದಗೈದರು. ಅತಿಥಿಗಳಾದ ಧನಂಜಯ ಪ್ರಭು, ಉಪನ್ಯಾಸಕ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.