ಬಂಟಕಲ್(ನ,15): ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶ್ರೇಯಾ ರವರು ಕಾರ್ಕಳದ ಕೆ.ಡಿ ಕಿಣಿ ಕ್ರೀಡಾಂಗಣದಲ್ಲಿ ಕಾರ್ಕಳದ ಭುವನೇಂದ್ರ ಕಾಲೇಜಿನ ರೋಟರಾಕ್ಟ್ ಕ್ಲಬ್ ಆಯೋಜಿಸಿದ ಜಿಲ್ಲಾ ಮಟ್ಟದ ಮಹಿಳೆಯರ ಸಿಂಗಲ್ಸ್ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿರುತ್ತಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ. ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಅಭಿನಂದಿಸಿರುತ್ತಾರೆ.












