ಕಾಳಾವರ(ನ,20): ಕಾಳಾವರ ಶ್ರೀ ಮಹಾಲಿಂಗೇಶ್ವರ ಹಾಗೂ ಕಾಳಿಂಗ (ಸುಬ್ರಹ್ಮಣ್ಯ) ದೇವಸ್ಥಾನದ ವರ್ಷಂಪ್ರತಿ ನಡೆಯುವ ಷಷ್ಠಿ ಪ್ರಯುಕ್ತ ಪೂರ್ವಭಾವಿ ಸಭೆ ದೇವಸ್ಥಾನದ ವಠಾರದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಹೆಗ್ಡೆ ಶಾನಾಡಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಷಷ್ಠಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ವೇದಿಕೆಯಲ್ಲಿ ಉಪಸ್ಥಿತರಿದ್ದ ಸಮಿತಿಯ 9 ಸದಸ್ಯರು ಅನಾವರಣಗೊಳಿಸಿದರು.
ಶ್ರೀ ಚಂದ್ರಶೇಖರ ಹೆಗ್ಡೆ ಯವರು ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿ ಉತ್ಸವಕ್ಕೆ ಗ್ರಾಮಸ್ಥರ ಸಹಕಾರವನ್ನು ಕೋರಿದರು. ಈ ಸಂದರ್ಭದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಿರಂಜನ ಗೌಡ, ಪಂಚಾಯತ್ ಅಧ್ಯಕ್ಷರಾದ ಆಶಾ ಶೆಟ್ಟಿ, ಉಪಾಧ್ಯಕ್ಷರಾದ ರಾಮಚಂದ್ರ ನಾವಡ, ಪಂಚಾಯತ್ ಸದಸ್ಯರುಗಳು ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಅಶೋಕ ಕುಮಾರ ಶೆಟ್ಟಿ, ಭರತ್ ಕುಮಾರ್ ಶೆಟ್ಟಿ, ದೇವಾಲಯದ ಪ್ರಧಾನ ಅರ್ಚಕರಾದ ಸತ್ಯನಾರಾಯಣ ಪುರಾಣಿಕ, ಮಹೇಶ ಕಾಳಾವರ, ಶ್ರೀಲತಾ, ಲಲಿತಾ, ಸಮಿತಿಯ ಮಾಜಿ ಅಧ್ಯಕ್ಷರಾದ ರವಿರಾಜ ಶೆಟ್ಟಿ ಕೋಟೇಶ್ವರ, ಕೋಟಿಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೃಷ್ಣದೇವ ಕಾರಂತ,ಸಮಿತಿಯ ಮಾಜಿ ಸದಸ್ಯರು, ಪೊಲೀಸ್ ಸಿಬ್ಬಂದಿಗಳು ,ಕಾಳವರ ಊರ ಪ್ರಮುಖರು, ಯುವಕ ಮಂಡಲ ,ಮಹಿಳಾ ಮಂಡಲದ ಸದಸ್ಯರು ಆಗಮಿಸಿ ಷಷ್ಠಿ ಉತ್ಸವದ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.
ಸಮಿತಿಯ ಸದಸ್ಯರಾದ ರಂಜಿತ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಚಂದ್ರಪೂಜಾರಿ ವಂದಿಸಿದರು. ಉಪನ್ಯಾಸಕ ಕಾಳಾವರ ಉದಯ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.