ಕೋಟೇಶ್ವರ (ನ,22): ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವಕಾಲೇಜಿನ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಾಗಾರವನ್ನು ನ,19 ರಂದು ಹಮ್ಮಿಕೊಳ್ಳಲಾಯಿತು.
ಕುಂದಾಪುರದ ಡಿವೈಎಸ್ಪಿ ಕೆ. ಶ್ರೀಕಾಂತ್ ರವರು ಕಾರ್ಯಾಗಾರವನ್ನು ಉದ್ಘಾಟಿಸಿ ,ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕಾನೂನು ಅರಿವು ಮೂಡಿಸುವುದರ ಬಗ್ಗೆ ವಿವರಿಸುತ್ತಾ ಇಂದಿನ ವಿದ್ಯಾರ್ಥಿಗಳು ಮಾದಕದ್ರವ್ಯ ವ್ಯಸನಕ್ಕೆ ಒಳಪಡುವ ಪ್ರಕರಣ ಹೆಚ್ಚಾಗಿ ಕಾಣುತ್ತಿದ್ದೇವೆ. ಇದರಿಂದ ತಮ್ಮ ಇಡೀ ವಿದ್ಯಾರ್ಥಿ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಹಾಗೂ ಮೊಬೈಲ್ ಬಳಕೆ, ಫೇಸ್ಟುಕ್, ಇನ್ಸ್ಟಾಗ್ರಾಂ, ವಾಟ್ಸಾಪ್ ಗಳನ್ನು ತುಂಬಾ ಜಾಗ್ರತೆಯಿಂದ ಬಳಸಬೇಕು ಮತ್ತು ವಾಹನಗಳನ್ನು ಚಲಾಯಿಸುವಾಗ ಜಾಗ್ರತೆ ವಹಿಸಬೇಕು. ವಾಹನಕ್ಕೆ ಸಂಬಂಧಪಟ್ಟಂತ ದಾಖಲೆ ಪತ್ರಗಳಿರುತ್ತದೆ ಅದನ್ನು ಸರಿಯಾಗಿ ಇಟ್ಟುಕೊಂಡಿರಬೇಕು. ಹಾಗೂ ವಿದ್ಯಾರ್ಥಿನಿಯರಿಗೆ ತಮ್ಮ ರಕ್ಷಣೆಯನ್ನು ಯಾವ ರೀತಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕುಂದಾಪುರದ ಎಸ್.ಐ ಸದಾಶಿವ ಗೌರೋಜಿ ತವರು ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ಗಳಲ್ಲಿ ಸಂದೇಶಗಳನ್ನು ಕಳಿಸುವಾಗ ಯೋಚನೆ ಮಾಡಿ ಕಳುಹಿಸಬೇಕು. ಯಾರದ್ದೊ ತಪ್ಪಿಗೆ ಇನ್ಯಾರೋ ಶಿಕ್ಷೆ ಅನುಭವಿಸುವಂತೆ ಆಗುತ್ತದೆ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಡಾ. ಎಚ್ ರಮೇಶ್ ಶೆಟ್ಟಿ ಯವರು ಮಾತನಾಡಿ ಇವತ್ತಿನ ದಿನದಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯವಾಗಿದೆ ಎಂದರು. ಹಾಗೆಯೇ ಸಂಸ್ಥೆಯ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಜಿ ಭರತ್ ಶೆಟ್ಟಿ ಹಾಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಉಷಾ ಕಿರಣ್.ಎಸ್.ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕ ಪ್ರಕಾಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.