ಬಂಟಕಲ್(ನ,26): ಶ್ರೀ ಮಧ್ವ ವಾದಿರಾಜ ಇಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ ಬಂಟಕಲ್ ಇದರ ಪ್ರಸಕ್ತ ಸಾಲಿನ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮವು ದಿನಾಂಕ ನ,24 ರಂದು ಕಾಲೇಜಿನ ಆವರಣದಲ್ಲಿ ಜರುಗಿತು.

ಶಿರ್ವ ಪೋಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರೀ ಶ್ರೀಶೈಲ ಮುರುಗೋಡ್ ರವರು 2021-22ನೇ ಸಾಲಿನ ವಿದ್ಯಾರ್ಥಿ ಪರಿಷತ್ತನ್ನು ಉದ್ಘಾಟಿಸಿದರು. ವಿದ್ಯಾರ್ಥಿ ಪರಿಷತ್ತಿಗೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪದ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಇವರು ವಿದ್ಯಾರ್ಥಿ ನಾಯಕನಾಗಿ ತಮ್ಮ ಅನುಭವವನ್ನು ಹಂಚಿಕೊಂಡರು. ವಿದ್ಯಾರ್ಥಿಗಳು ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಹಾಗೂ ಸಂಸ್ಥೆಗೆ ಪ್ರಾಮಾಣಿಕರಾಗಿ ಸಮಾಜಕ್ಕೆ ಮಾದರಿಯಾಗಿರವಂತೆ ವಿದ್ಯಾರ್ಥಿ ಪರಿಷತ್ಗೆ ಮಾರ್ಗದರ್ಶನ ನೀಡಿದರು.

ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ತಿರುಮಲೇಶ್ವರ ಭಟ್ ಹೊಸದಾಗಿ ಆಯ್ಕೆಯಾದ ವಿದ್ಯಾರ್ಥಿ ಪರಿಷತ್ನ ಪದಾಧಿಕಾರಿಗಳಿಗೆ ಶುಭ ಹಾರೈಸಿ ತಮ್ಮ ಜವಾಬ್ದಾರಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸುವಂತೆ ಹೇಳಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಸಿ ಕೆ ಮಂಜುನಾಥ್ ಉಪಸ್ಥಿತರಿದ್ದರು.












