ಗಂಗೊಳ್ಳಿ (ನ,29): ನಮ್ಮ ಭಾರತದ ಸಂವಿಧಾನದ ಬಗೆಗೆ ಅರಿವನ್ನು ಮೂಡಿಸುವಲ್ಲಿ ಪ್ರಾಥಮಿಕ ಹಂತದಿಂದಲೇ ಪಠ್ಯಪುಸ್ತಕಗಳಲ್ಲಿ ಅದರ ಬಗೆಗಿನ ಹೆಚ್ಚಿನ ವಿವರಗಳನ್ನು ನೀಡಬೇಕಿದೆ. ದೇಶದ ಜವಾಬ್ದಾರಿಯುತ ನಾಗರಿಕನಾಗಿ ಸಂವಿಧಾನದ ಅರಿವನ್ನು ಹೊಂದಿರಬೇಕಾದುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಆಂಗ್ಲಭಾಷಾ ಉಪನ್ಯಾಸಕರಾದ ಥಾಮಸ್ ಪಿ. ಎ ಅಭಿಪ್ರಾಯಪಟ್ಟರು.
ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸಂವಿಧಾನ ದಿವಸದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ, ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಭಟ್, ಸಂಸ್ಕೃತ ಉಪನ್ಯಾಸಕರಾದ ವೆಂಕಟೇಶಮೂರ್ತಿ ಎನ್. ಸಿ ಮತ್ತು ನರೇಂದ್ರ ಎಸ್ ಗಂಗೊಳ್ಳಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಮಂಜುಳಾ ಕಾರ್ಯಕ್ರಮವನ್ನು ನಿರ್ವಹಿಸಿದರು. ದರ್ಶನ್ ವಂದಿಸಿದರು.