ಮಧುವನ(ನ,29): ಇಲ್ಲಿನ ಇ ಸಿ ಆರ್ ಕಾಲೇಜಿನಲ್ಲಿ ನ,26ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳಸಂಗ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸಂವಿಧಾನದ ಮಹತ್ವವನ್ನು ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜನಾಧಿಕಾರಿ ಹಾಗೂ ವಾಣಿಜ್ಯ ಶಾಸ್ತ್ರ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀ ಅಶೋಕ್ ಜೋಗಿ ಯವರು ಸಂವಿಧಾನ ರಚನೆ, ಮಹತ್ವ, ಪ್ರಜೆಗಳ ಹಕ್ಕು ಕರ್ತವ್ಯದ ಕುರಿತು ಮಾತನಾಡಿದರು. ಸಂವಿಧಾನ ರಚನೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.
ಆಡಳಿತಾಧಿಕಾರಿ ಶ್ರೀ ಜೋಬಿನ್ ಜೋಸೆಫ್, ಸಿಬ್ಬಂದಿ ವರ್ಗ ಹಾಗೂ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರು ಪಾರ್ಥಿಸಿದರು. ಉಪನ್ಯಾಸಕಿ ಸಮಿತಾ ಸ್ವಾಗತಿಸಿದರು,ಕುಮಾರಿ ಆರ್ಪಿತಾ ನಿರೂಪಿಸಿದರು.