ಪುತ್ತೂರು (ನ, 30) : ಮನುಷ್ಯ ಪರಿಪೂರ್ಣನಾಗಬೇಕಾದರೆ ಶಾರೀರಿಕ ಮತ್ತು ಮಾನಸಿಕ ದೃಡತೆ ಅಗತ್ಯವಾಗಿದ್ದು, ವಾಲಿಬಾಲ್ನಂತಹ ದೈಹಿಕ ಪರಿಶ್ರಮವನ್ನು ಬಯಸುವ ಆಟಗಳಿಂದ ನಾವಿದನ್ನು ಪಡೆಯಲು ಸಾಧ್ಯ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಸಂಚಾಲಕ ಸುಬ್ರಮಣ್ಯ ಭಟ್ ಟಿ. ಎಸ್. ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಮಾತನಾಡಿ ಕ್ರೀಡೆಗಳು ನಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ದೈಹಿಕ ಸ್ಥಿರತೆಯನ್ನು ನೀಡುವಲ್ಲಿ ಸಹಕಾರಿಯಾಗಿದೆ. ತನ್ಮೂಲಕ ಶಾರೀರಿಕ ಧ್ರಡತೆ ಮತ್ತು ಆತ್ಮವಿಶ್ವಾಸವನ್ನು ಇದು ಹೆಚ್ಚಿಸುತ್ತದೆ ಎಂದರು.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣ ಭಟ್ ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಸಿಬ್ಬಂದಿಗಳು, ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳು ಸಮಾರಂಭದಲ್ಲಿ ಹಾಜರಿದ್ದರು. ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 14 ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಸ್ವಾಗತಿಸಿ, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಉಪನ್ಯಾಸಕ ಎನಚಯ್, ಪಿ. ವಂದಿಸಿದರು. ದಿತಾ. ಎಸ್. ಕಾರ್ಯಕ್ರಮ ನಿರ್ವಹಿಸಿದರು.















