ಕುಂದಾಪುರ (ನ,30): ಗುಣಮಟ್ಟದ ಆಹಾರ ಮತ್ತು ಆತಿಥ್ಯದಲ್ಲಿ ದೇಶದಾದ್ಯಂತ ಹೆಸರುವಾಸಿಯಾಗಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿಯವರ ಸಾರಥ್ಯದ ಚೆಫ್ ಟಾಕ್ ಪ್ರೈವೇಟ್ ಲಿಮಿಟೆಡ್ ನ ಕೋಲಾರ ಶಾಖೆ ಇತ್ತೀಚೆಗೆ ಉದ್ಘಾಟನೆಗೊಂಡಿತು.
ಕೋಲಾರದ ನರಸಾಪುರದಲ್ಲಿನ ಶಾಖೆಯ ಉದ್ಘಾಟನೆಯಲ್ಲಿ ಮಾಜಿ ಶಾಸಕರಾದ ಶ್ರೀ ವರ್ತೂರ್ ಪ್ರಕಾಶ್ ,ಹಾಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಗೋವಿಂದರಾಜು ಹಾಗೂ ಶ್ರೀ ಜೈನ ಯಕ್ಷೇಶ್ವರಿ ಮತ್ತು ಶ್ರೀ ಶನೇಶ್ವರ ಪಾತ್ರಿಗಳಾದ ವಿಜಯ್ ಪೂಜಾರಿ ಉಪ್ಪುಂದ ರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಗುಣಮಟ್ಟದ ಆಹಾರ ಮತ್ತು ಆತಿಥ್ಯಕ್ಕೆ ಹೆಸರುವಾಸಿಯಾದ ಚೆಫ್ ಟಾಕ್ ಸಂಸ್ಥೆ ದೇಶದ ವಿವಿಧ ಭಾಗಗಳಲ್ಲಿ ಶಾಖೆಗಳನ್ನು ಹೊಂದಿದ್ದು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿದೆ.
ವರದಿ : ಈಶ್ವರ್ ಸಿ ನಾವುoದ















