ಶಿರ್ವ(ಡಿ,5): ಕಂಪ್ಯೂಟರ್ ಜ್ಞಾನ ಇಂದಿನ ಯುವಕರಲ್ಲಿ ಅತ್ಯಂತ ಅವಶ್ಯಕವಾಗಿದೆ. ಕಲಿಕೆಯ ಜೊತೆಗೆ ಉದ್ಯೋಗ ಕ್ಷೇತ್ರದಲ್ಲಿ ಕಂಪ್ಯೂಟರ್ ಜ್ಞಾನವನ್ನು ಸಮರ್ಪಕವಾಗಿ ಅಳವಡಿಸಿಕೊಂಡದಲ್ಲಿ ಉತ್ತಮ ರೀತಿಯ ಬೆಳವಣಿಗೆ ಕಾಣಬಹುದೆಂದು ಕಾಲೇಜಿನ ಕಚೇರಿ ಅಧೀಕ್ಷಕಿ ಶ್ರೀಮತಿ ಡೊರಿಯನ್ ಡಿಸಿಲ್ವಾ ಹೇಳಿದರು.
ಅವರು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಕಂಪ್ಯೂಟರ್ ಸಾಕ್ಷರತ ಕೋಶ ಜಂಟಿಯಾಗಿ ಏರ್ಪಡಿಸಿದ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ ದಲ್ಲಿ ಮುಖ್ಯ ಅತಿಥಿಗಳಾಗಿ ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ವಹಿಸಿದ್ದರು .
ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಕಂಪ್ಯೂಟರ್ ಸರ್ಟಿಫಿಕೇಟ್ ಕೋರ್ಸ್ ಗಳ ಮಹತ್ವದ ಕುರಿತು ಮಾತನಾಡಿದರು. ಕು.ನಿವೇದಿತಾ ನಿಖಿಲ್ ಪೂಜಾರಿ ಪ್ರಾಸ್ತವಿಕ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಅಧಿಕಾರಿ ಯಶೋಧ , ಪ್ರಿಯಾಂಕ, ಭೋದಕ , ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಂಪ್ಯೂಟರ್ ಸಾಕ್ಷರತೆ ಕೋಶನ ಸಂಯೋಜಕಿ ಶ್ರೀಮತಿ ದಿವ್ಯಶ್ರೀ ರವರು ಸ್ವಾಗತಿಸಿ, ಕು. ಪ್ರೀತಿಕಾ ವಂದಿಸಿದರು. ಕು.ಚೈತ್ರ ಮತ್ತು ಬಳಗ ಪ್ರಾರ್ಥಿಸಿ ಕು.ಅಶ್ವಿತಾ ಕಾರ್ಯಕ್ರಮ ನಿರೂಪಿಸಿದರು.