ಶಿರ್ವ(ಡಿ.5): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 36 ವರ್ಷ ಅಧಿಕ ಕಾಲ ಕಾಲೇಜಿನ ಕಚೇರಿ ಸಹಾಯಕ ಸಿಬ್ಬಂದಿಯಾಗಿ ಸೇವೆಸಲ್ಲಿಸಿದ ಶ್ರೀರಂಗ ರವರಿಗೆ ಬಿಳ್ಕೊಡುಗೆ ಕಾರ್ಯಕ್ರಮವನ್ನು ಡಿ,04 ಹಮ್ಮಿಕೊಳ್ಳಲಾಯಿತು.
ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಜೊತೆಗೆ ಕಚೇರಿ ಸಿಬ್ಬಂದಿ ವರ್ಗದವರು ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆ. ಕಾಲೇಜಿನ ಸ್ವಚ್ಛತೆ ಮತ್ತು ಶುಚಿತ್ವವನ್ನು ಕಾಪಾಡುವುದರಲ್ಲಿ ಸಹಾಯಕ ಸಿಬ್ಬಂದಿ ಪಾತ್ರ ಮಹತ್ವದ್ದು. ಶ್ರೀರಂಗ ರವರು ನಮ್ಮ ಸಂಸ್ಥೆಯಲ್ಲಿ ಅಚ್ಚುಕಟ್ಟಾಗಿ ಅವರ ಕಾರ್ಯ ದಕ್ಷತೆಯನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದರು ಹಾಗೂ ಅವರ ಕಾರ್ಯವೈಖರಿಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ ಡೇನ್ನಿಸ್ ಅಲೆಕ್ಸಾಂಡರ್ ಡೇಸ್ ರವರು ಮಾತನಾಡಿ ಶುಭ ಹಾರೈಸಿದರು.
ಕಚೇರಿ ಸಿಬ್ಬಂದಿ ಶ್ರೀ ಲಾರೆನ್ಸ್ ಡಿಸೋಜರವರು ಸನ್ಮಾನ ಪತ್ರವನ್ನು ವಾಚಿಸಿದರು. ಕಚೇರಿ ಸಿಬ್ಬಂದಿ ರಾದ ಶ್ರೀ ರಿಚರ್ಡ್ ಸಿಕ್ವೆರಾ ರವರು ಅಭಿಪ್ರಾಯ ವ್ಯಕ್ತಪಡಿಸಿದರು. ಅಧ್ಯಾಪಕ ವೃಂದದ ವತಿಯಿಂದ ಹಿರಿಯ ಉಪನ್ಯಾಸಕ ಶ್ರೀ ವಿಠ್ಠಲ್ ನಾಯಕರವರ ಮಾತನಾಡಿದರು .
ಕಾರ್ಯಕ್ರಮದಲ್ಲಿ ಕಾಲೇಜಿನ ಕಚೇರಿ ಅಧೀಕ್ಷಕಿ ಶ್ರೀಮತಿ ಡೋರಿನ್ ಡಿಸಿಲ್ವಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಯಶೋಧ, ಸ್ಟಾಫ್ ಸೆಕ್ರೆಟರಿ ಶ್ರೀಮತಿ ರೀಮಾ ಲೋಬೋ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೇ ಶ್ರೀಮತಿ ಅಮಿತಾ, ಆಡಳಿತ ಮಂಡಳಿಯ ಸದಸ್ಯೆ ಶ್ರೀಮತಿ ಲೀನಾ ಮಚ್ಚಾದೋ , ನಿವೃತ್ತ ಅಧ್ಯಾಪಕರು ಮತ್ತು ಆಡಳಿತ ಸಿಬ್ಬಂದಿ ವರ್ಗದವರು, ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಐರಿನ್ ಮೆಂಡೋನ್ಸಾ, ಅಧ್ಯಾಪಕ ಬಂಧುಗಳು ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಸರ್ವರನ್ನು ಸ್ವಾಗತಿಸಿದರು. ಕಚೇರಿ ಸಿಬ್ಬಂದಿ ಕು.ಗ್ಲೆಂಡಾ ಡಿಸೋಜಾ ವಂದಿಸಿ ಉಪನ್ಯಾಸಕ ಕೋಸ್ಟಾನ್ವಿ ಗೊನ್ಸಾಲ್ವ್ಸ್ ಕಾರ್ಯಕ್ರಮ ನಿರೂಪಿಸಿದರು.