ಕೊಲ್ಲೂರು(ಡಿ,7): ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆರಕ್ಷಕ ಠಾಣೆ ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಚರಣೆ 2021ರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅಪರಾಧ ತಡೆಯ ಬಗ್ಗೆ ಕೊಲ್ಲೂರಿನ ಠಾಣಾಧಿಕಾರಿ ನಾಸಿರ್ ಹುಸೇನ್ರವರು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಅರುಣ್ಪ್ರಕಾಶ್ ಶೆಟ್ಟಿಯವರು ವಹಿಸಿಕೊಂಡಿದ್ದರು.ಉಪನ್ಯಾಸಕರಾದ ಗೋಪಾಲಕೃಷ್ಣ ಜಿ.ಬಿ. ಪೂರ್ಣಿಮಾ ಎನ್ ಜೋಯಿಸ್, ಸುಕೇಶ್ ಶೆಟ್ಟಿ ಹೊಸಮಠ, ರಾಮನಾಯ್ಕ ಕೆ.ಬಿ. ಪ್ರ.ದ.ಸಹಾಯಕರಾದ ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ನಾಗರಾಜ ಅಡಿಗ ಕೆ. ಕಾರ್ಯಕ್ರಮ ನಿರ್ವಹಿಸಿದರು.