ಕುಂದಾಪುರ(ಡಿ.13): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮದ ಪ್ರಯುಕ್ತ ಕುಂದಾಪುರ ಗ್ರಾಮಾಂತರ ಪೋಲಿಸ್ ಠಾಣೆ ಕಂಡ್ಲೂರು ಇದರ ಸಹಯೋಗದೊಂದಿಗೆ ಅಪರಾಧ ತಡೆ ಮಾಸಾಚರಣೆ 2021 ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಕಂಡ್ಲೂರು ಪೋಲಿಸ್ ಸಬ್ ಇನ್ಸ್ಪೆಕ್ಟರ್ ಶ್ರೀ ನಿರಂಜನ್ ಗೌಡ ಬಿ ಎಸ್ ಆಗಮಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. “ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾದದ್ದು, ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೇ ಹೋದಲ್ಲಿ ನಾವು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್ ಕ್ರೈಮ್ ಇವುಗಳ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ. ಅಲ್ಲದೆ ವಿಧ್ಯಾರ್ಥಿಗಳು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಮನವಿ ಮಾಡಿದರು.”

ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆಯವರು ಮಾತನಾಡಿ ಸಮಾಜದ ಕಾನೂನು ಪಾಲನೆಯಲ್ಲಿ ಪೋಲಿಸರ ಪಾತ್ರ ನಿಜವಾಗಿಯೂ ಶ್ಲಾಘನೀಯ, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಅವರ ಜೊತೆ ಕೈಜೋಡಿಸಬೇಕಾದುದು ಅವಶ್ಯಕ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರು,ಅಕಾಡೆಮಿಕ್ ಡೀನ್, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿ ಪ್ರಥಮ್ ರಾಯ್ಕರ್ ಸ್ವಾಗತಿಸಿದರು. ಬೇಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊಫ಼ೆಸರ್ ದೀಪಕ್ ಶೆಟ್ಟಿ ವಂದಿಸಿದರು.













