ಬಸ್ರೂರು(ಡಿ.18): ಇಲ್ಲಿನ ನಿವೇದಿತ ಪ್ರೌಢಶಾಲೆಯಲ್ಲಿ ಡಿ.13ರಂದು ಕಾನೂನು ಅರಿವು ಶಿಬಿರ ಹಮ್ಮಿಕೊಳ್ಳಲಾಯಿತು. ಕಂಡ್ಲೂರಿನ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ಗಳಾದ ಶ್ರೀ ನಿರಂಜನ ಗೌಡ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ವಿದ್ಯಾರ್ಥಿಗಳು ಮೊಬೈಲ್ ಹೆಚ್ಚಾಗಿ ಬಳಸುವುದರಿಂದ ಆಗುವ ತೊಂದರೆ, ಪೋಕ್ಸೋ ಕಾಯ್ದೆ ಬಗ್ಗೆ ಅರಿವು, ಪರವಾನಿಗೆ ಇಲ್ಲದೆ ವಾಹನ ಚಲಾಯಿಸುವುದರಿಂದ ಆಗುವ ಸಮಸ್ಯೆಗಳ ಬಗ್ಗೆ, ನಮ್ಮ ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಅತೀವ ಕಾಳಜಿ ಬೇಕು, ಪ್ರತಿಯೊಬ್ಬ ವಿದ್ಯಾರ್ಥಿಯು ಒಂದೊಂದು ಗಿಡವನ್ನು ನೆಟ್ಟು ಬೆಳೆಸಬೇಕು ಎಂದು ಸಾಕಷ್ಟು ವಿಚಾರವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ನಿವೇದಿತ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ ಯವರು ಸ್ವಾಗತ ಭಾಷಣ ಮಾಡಿ ಶಿಬಿದ ಧ್ಯ್ಯೇಯೋದ್ದೇಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.ಹಿರಿಯ ಅಧ್ಯಾಪಕರಾದ ಶ್ರೀ ಉದಯ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ರಾಜರಾಮ್ ಶೆಟ್ಟಿ ಕಾರ್ಯಕ್ರಮದಲ್ಲಿ ಸರ್ವರಿಗೂವಂದನಾರ್ಪಣೆ ಅರ್ಪಿಸಿದರು.











