ಕುಂದಾಪುರ (ಡಿ.18): ಶ್ರೀ ಶ್ರೀ ಮದ್ ಗಂಗಾಧರೇಂದ್ರ ಮಹಾಸ್ವಾಮಿಗಳು ಸ್ವರ್ಣವಲೀ ಮಠ ಶಿರಸಿ ಇವರ ಮಹಾ ಪೋಷಕತ್ವದಲ್ಲಿ ಕುಂದಾಪುರದ ಭಗವದ್ಗೀತಾ ಆಚರಣಾ ಸಮಿತಿಯವರು ನಡೆಸಿದ ಉಡುಪಿ ಜಿಲ್ಲಾ ಮಟ್ಟದ ಭಗವದ್ಗೀತಾ ಕಂಠಪಾಠ ಮತ್ತು ಭಾಷಣ ಸ್ಪರ್ಧೆಯಲ್ಲಿ ಸುಣ್ಣಾರಿಯ ಎಕ್ಸಲೆಂಟ್ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಪ್ರೌಢ ಶಾಲಾ ವಿಭಾಗದ ವೈಯಕ್ತಿಕ ಕಂಠಪಾಠ ಸ್ಪರ್ಧೆಯಲ್ಲಿ 9ನೇ ತರಗತಿಯ ಸಮೃದ್ಧ ಎಂ ಉಪಾಧ್ಯ ,ಭಾಷಣ ಸ್ಪರ್ಧೆಯಲ್ಲಿ 8ನೇ ತರಗತಿ ಸಾಧನಾ ದೇವಾಡಿಗ ಹಾಗೂ ಕಾಲೇಜು ವಿಭಾಗದ ವೈಯಕ್ತಿಕ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವರ್ಷ ಹೆಗಡೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಕಾಲೇಜು ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅನುಶ್ರೀ ಪ್ರಥಮ ಸ್ಥಾನವನ್ನು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ರಾಶ್ಯ ಶೆಟ್ಟಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸುತ್ತಾ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಸಹಕಾರ ಮತ್ತು ತರಬೇತಿ ನಿಡಲಾಗುವುದು ಮತ್ತು ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸಾಧನೆಗೈಯುಂತಾಗಲಿ ಎಂದು ಶುಭ ಹಾರೈಸಿದರು.
















