ಮೂಡ್ಲಕಟ್ಟೆ(ಡಿ.19): ಇಲ್ಲಿನ ಎಂ ಐ ಟಿ:ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ನರ್ಸಿಂಗ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ಇತ್ತೀಚೆಗೆ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕರಾಟೆ ಅಸೋಸಿಯೇಷನ್ ಕರ್ನಾಟಕ ಇದರ ಕಾರ್ಯದರ್ಶಿ, ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಅಧ್ಯಕ್ಷರು, ಹಾಗು 5 ಡಾನ್ ಬ್ಲಾಕ್ ಬೆಲ್ಟ್ , ವರ್ಲ್ಡ್ ಕರಾಟೆ ಫೆಡರೇಶನ್ ತರಬೇತುದಾರ ಶ್ರೀ. ಕೀರ್ತಿ ಜಿ.ಕೆ ಯವರು ಆಗಮಿಸಿದ್ದು, ಅನಿರೀಕ್ಷಿತವಾಗಿ ನಡೆಯುವ ಘಟನೆ ಸಂದರ್ಭದಲ್ಲಿ ಹೇಗೆ ಪಾರಾಗಬೇಕು, ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳುವುದು ಎನ್ನುವ ಕುರಿತು ಸ್ವಯಂ ರಕ್ಷಣೆ ಕೌಶಲ ಪ್ರಾತ್ಯಕ್ಷಿಕೆ ನೀಡಿದರು.
ಕರಾಟೆ ಇಂಡಿಯಾ ಸಂಸ್ಥೆಯ ರಾಷ್ಟ್ರೀಯ ಆಟಗಾರರಾಗಿರುವ ಮತ್ತು ಸ್ವಯಂ ರಕ್ಷಣಾ ತರಬೇತುದಾರರಾಗಿರುವ ಅಂಕಿತ ಬಿ. ಟಿ ಮತ್ತು ಉಡುಪಿ ಜಿಲ್ಲೆಯ ಕರಾಟೆ ಅಸೋಸಿಯೇಷನ್ ಡೈರೆಕ್ಟರ್ ಮತ್ತು ಮೂಡ್ಲಕಟ್ಟೆ ಕಾಲೇಜಿನ ಸಿಬ್ಬಂದಿ ಅಕ್ಷಯ್ ಪೂಜಾರಿ ಯವರು ಮಕ್ಕಳಿಗೆ ತರಬೇತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರು,ಉಪ ಪ್ರಾಂಶುಪಾಲರು ಕಾಲೇಜಿನ ಡೀನ್, ಸಿಬ್ಬಂದಿ ವರ್ಗ ಹಾಗು ಪ್ರಥಮ ವರ್ಷದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಪ್ರೊ. ಸೂಕ್ಷ್ಮ ಅಡಿಗ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.