ಮೂಡಬಿದಿರೆ(ಡಿ,22): ಶ್ರೀ ಧವಲಾ ಕಾಲೇಜಿನ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗ, ವಾಣಿಜ್ಯ ಶಾಸ್ತ್ರ ವಿಭಾಗದೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಬಿಂದು ನಾಯರ್ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.
ಸಹಕಾರ ತತ್ವದ ಆಶಯಗಳು, ಪ್ರಯೋಜನಗಳು, ಸಹಕಾರ ಕ್ಷೇತ್ರದ ಪ್ರಗತಿ ಹಾಗೂ ದೇಶದ ಅಭಿವೃದ್ಧಿಯಲ್ಲಿ ಸಹಕಾರಿ ಸಂಸ್ಥೆಗಳ ಕೊಡುಗೆಗಳ ಬಗ್ಗೆ ಹಾಗೂ ಸಹಕಾರಿ ಕ್ಷೇತ್ರದ ಉದ್ಯೋಗಾವಕಾಶಗಳ ಕುರಿತು ಉಪಯುಕ್ತ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಸುದರ್ಶನ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗ ಮುಖ್ಯಸ್ಥೆ ಡಾ.ರೂಪಾ ಸ್ವಾಗತಿಸಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಮಹಾವೀರ ಆಜ್ರಿಯವರು ಹಾಗೂ ಕಾಲೇಜಿನ ಐಕ್ಯುಎಸಿ ಸಂಯೋಜಕರಾದ ಡಾ.ಪದ್ಮಜಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಶ್ರೀ ಸೂರಜ್ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಕುಸುಮ ಕಾರ್ಯಕ್ರಮ ನಿರೂಪಿಸಿದರು.