ಕೋಟ (ಡಿ,23): ಯಕ್ಷಗಾನ ವಿದ್ವಾಂಸ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ, ರಂಗನಟ, ಸಾಹಿತಿ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣ 2022 ರ ಪ್ರಶಸ್ತಿಯನ್ನು ಯಕ್ಷಗಾನ ಹಿರಿಯ ಕಲಾವಿದ ಕೋಡಿ ವಿಶ್ವನಾಥ ಗಾಣಿಗರಿಗೆ ಪ್ರದಾನ ಮಾಡಲಾಗುವುದೆಂದು ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆ, ಕಾರ್ಯಾಧ್ಯಕ್ಷ ಮಹೇಶ ಉಡುಪ, ಮಂದಾರ್ತಿ ಅಧ್ಯಕ್ಷ ಬಲರಾಮ ಕಲ್ಕೂರು, ಉಪಾಧ್ಯಕ್ಷ ಜನಾರ್ದನ ಹಂದೆಯವರನ್ನೊಳಗೊಂಡ ಸಮಿತಿ ನಿರ್ಧರಿಸಿದೆ.
ಬಡಗು ತಿಟ್ಟಿನ ಕಮಲಶಿಲೆ ಮೇಳದಲ್ಲಿ ಗೆಜ್ಜೆ ಕಟ್ಟಿ, ಅಮೃತೇಶ್ವರಿ, ಸಾಲಿಗ್ರಾಮ, ಹಾಲಾಡಿ, ಸೌಕೂರು ಮೇಳಗಳಲ್ಲಿ ಕರ್ಣ, ಜಾಂಬವ, ಅರ್ಜುನ, ಶಲ್ಯ, ರಾವಣ, ಕಂಸ, ಶೂರಸೇನ, ಈಶ್ವರ ಕಾಲನೇಮಿ, ಶುಂಭ, ಮಧುಕೈಟಭ, ಅತಿಕಾಯ ಮೊದಲಾದ ಪಾತ್ರಗಳನ್ನು ನಿರ್ವಹಿಸಿದ ಕೋಡಿ ವಿಶ್ವನಾಥರು, ಅಟ್ಟೆ ಮುಂಡಾಸು ಕಟ್ಟುವುದರಲ್ಲಿ ದಾಖಲೆ ನಿರ್ಮಿಸಿದವರು.
2022 ರ ಫೆಬ್ರವರಿ 2 ರಂದು ಕೋಟದ ಪಟೇಲರ ಮನೆಯಂಗಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಕೋಡಿಯವರಿಗೆ ಉಡುಪ ಪ್ರಶಸ್ತಿಯನ್ನಿತ್ತು ಗೌರವಿಸಲಾಗುವುದೆಂದು ಸಾಲಿಗ್ರಾಮ ಮಕ್ಕಳ ಮೇಳದ ಟ್ರಸ್ಟ್ ಕಾರ್ಯದರ್ಶಿ ಸುಜಯಿಂದ್ರ ಹಂದೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ ಈಶ್ವರ್ ಸಿ ನಾವುಂದ.