ಬೆಂಗಳೂರು (ಡಿ.27): ನ್ಯೂಸ್ ಪೇಪರ್ ಆಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ಡಿ.26 ರಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಿದ ಗಣ್ಯರಿಗೆ ಕೊಡಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಯನ್ನು ಸಮಾಜ ಸೇವಕರು,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ) ಉಪ್ಪುಂದ ಇದರ ಅಧ್ಯಕ್ಷರು ,ಉದ್ಯಮಿ ಗೋವಿಂದ ಬಾಬು ಪೂಜಾರಿರವರಿಗೆ ನೀಡಿ ಗೌರವಿಸಲಾಯಿತು.
ವಿದ್ಯಾವಾಚಸ್ಪತಿ ಸಂತೋಷ ಭಾರತಿ ಶ್ರೀಗಳು ,ಸಭಾಪತಿಗಳಾದ ಬಸವರಾಜ್ ಹೊರಟ್ಟಿರವರು ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ಮತ್ತು ಚಲನಚಿತ್ರ ನಟಿ ಶೃತಿ ಮತ್ತು ಅಧ್ಯಕ್ಷರಾದ ಶ್ರಾವಣ್ ಲಕ್ಷಣ್ ರವರು ಚಲನಚಿತ್ರ ನಟಿ ಹರ್ಷಿಕಾ ಪೂಣಚ್ಚರವರು ಡಾ. ಗೋವಿಂದ ಬಾಬು ಪೂಜಾರಿಯವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿದರು. ವರದಿ: ಈಶ್ವರ ಸಿ ನಾವುoದ