ಉಡುಪಿ( ಡಿ.30): ಉಡುಪಿಯ ತೋನ್ಸೆ ಗ್ರಾಮ ಪಂಚಾಯತ್ ಪಡುಕುದ್ರು ವಾರ್ಡಿನ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಹೇಶ್ ಪೂಜಾರಿ ಅವರು 108 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ನಿತ್ಯಾನಂದ ಕೆಮ್ಮಣ್ಣರವರ ನಿಧನದಿಂದ ತೆರವಾದ ಸ್ಥಾನಕ್ಕೆ ಡಿ.27 ರಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಮಹೇಶ್ ಪೂಜಾರಿ ಯವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ವೆಂಕಟೇಶ್ ಕುಂದರ್ ಎದುರು 108 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.