ಕೊಲ್ಲೂರು (ಜ.3): ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು, ಗ್ರಾಮ ಪಂಚಾಯತ್ ಕೊಲ್ಲೂರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ 15 ರಿಂದ 18 ವರ್ಷದ ವಿದ್ಯಾರ್ಥಿಗಳಿಗೆ “ಕೋವ್ಯಾಕ್ಸಿನ್ ಲಸಿಕೆ ವಿತರಣಾ ಅಭಿಯಾನ”ಜ.1 ರಂದು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕರ ವಸತಿ ನಿಲಯದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶಿವರಾಮಕೃಷ್ಣ ಭಟ್ಟ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳು ದೇಶದ ಆಸ್ತಿ ಇವರನ್ನು ರಕ್ಷಿಸುವುದು ಸರ್ಕಾರದ ಆಧ್ಯ ಕರ್ತವ್ಯ . ಈ ಸಂದಿಗ್ಧ ಸಮಯದಲ್ಲಿ ಈ ಲಸಿಕಾ ಅಭಿಯಾನ ಅರ್ಥಪೂರ್ಣ ಆದ್ದರಿಂದ ಎಲ್ಲಾ ವಿದ್ಯಾರ್ಥಿಗಳು ಈ ಲಸಿಕೆಯನ್ನು ಧೈರ್ಯದಿಂದ ತೆಗೆದುಕೊಳ್ಳುವುದರ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮೂಕಾಂಬಿಕಾ ದೇವಳದ ಕಾರನಿರ್ವಾಹಣಾಧಿಕಾರಿಗಳಾದ ಶ್ರೀ ಎಸ್.ಪಿ.ಬಿ ಮಹೇಶ್ ವಹಿಸಿ ನಮ್ಮ ವಿದ್ಯಾ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಈ ಕರೋನದಂತಹ ಮಹಾ ಮಾರಿಯಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಲಸಿಕೆ ಅತೀ ಅಗತ್ಯ ವಿದ್ಯಾರ್ಥಿಗಳು ತಮ್ಮ ಸ್ವಚ್ಚತೆ, ಸಾಮಾಜಿಕ ಅಂತರ ಮತ್ತು ಲಸಿಕೆ ಪಡೆದು ತಮ್ಮನ್ನು ರಕ್ಷಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ನ ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ, ಗ್ರಾಮ ಪಂಚಾಯತ್ನ ಅಭಿವೃದ್ಧಿ ಅಧಿಕಾರಿಗಳಾದ ರುಕ್ಕನ್ನ ಗೌಡ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಅತಿಥಿ ಗಣ್ಯರನ್ನು ಪ್ರಾಸ್ತಾವಿಕ ಮಾತುಗಳೊಂದಿಗೆ ಕಾಲೇನ ಪಾಶುಪಾಲರಾದ ಶ್ರೀ ಎಸ್ ಅರುಣ್ ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು. ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದವೈದ್ಯಾಧಿಕಾರಿಗಳಾದ ಶ್ರೀ ಶೈಲೇಶ್ ರಾವ್ ಧನ್ಯವಾದಗೈದರು. ಉಪನ್ಯಾಸಕರಾದ ನಾಗರಾಜ ಅಡಿಗ ಕೆ. ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.