ಕುಂದಾಪುರ (ಜ.5): ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಉಡುಪಿ ಇವರು ವಿಶ್ವ ಏಡ್ಸ್ ದಿನದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಐವಿ / ಏಡ್ಸ್ ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಥಮ ಬಿ.ಸಿ.ಎ ವಿದ್ಯಾರ್ಥಿನಿ ಸೀಮಾ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಈ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜಿಸಿದ ಎನ್ಎಸ್ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಯವರನ್ನು ಸನ್ಮಾನಿಸಲಾಯಿತು. ಇಬ್ಬರಿಗೂ ಕಾಲೇಜಿನ ಪ್ರಾಂಶುಪಾಲರು, ಬೋಧಕ, ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.











