ಕುಂದಾಪುರ(ಜ.13): ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಜ.12 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಎನ್.ಎಸ್.ಎಸ್ ಉಡುಪಿ ಜಿಲ್ಲಾ ನೋಡಲ್ ಅಧಿಕಾರಿ ಶ್ರೀ ಪ್ರವೀಣ್ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ದೇಶ ನಿರ್ಮಾಣದಲ್ಲಿ ಎನ್.ಎಸ್.ಎಸ್.ನ ಪಾತ್ರ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.ಕಾಲೇಜಿನ ಎನ್.ಎಸ್.ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರವೀಣ್ ಮೋಗವೀರ, ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ ,ವಿದ್ಯಾರ್ಥಿ ಪ್ರತಿನಿಧಿಗಳಾದ ಸಂಪತ್ ಶೆಟ್ಟಿ ಹಾಗೂ ಅನುಷಾ ಉಪಸ್ಥಿತರಿದ್ದರು.

ಎನ್.ಎಸ್.ಎಸ್. ಸ್ವಯಂಸೇವಕರಾದ ವಿಘ್ನೇಶ್ ಶೆಟ್ಟಿ ಸ್ವಾಗತಿಸಿದರು.ಸುರಕ್ಷ್ ವಂದಿಸಿ, ಪ್ರತೀಕ್ಷಾ ಕಾರ್ಯಕ್ರಮ ನಿರೂಪಿಸಿದರು.











