ಉಡುಪಿ (ಜ.26): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ನೂತನ ಅಧ್ಯಕ್ಷರಾಗಿ ರಾಜೇಂದ್ರ ಸುವರ್ಣ ಹಿರಿಯಡ್ಕ ಆಯ್ಕೆಯಾಗಿದ್ದಾರೆ.

ಜನವರಿ26 ರಂದು ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ನಡೆದ ಸಂಘಟನೆಯ16 ನೇ ವಾರ್ಷಿಕ ಸಭೆಯಲ್ಲಿ 2022-24 ರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಾಡೋಜ ಡಾ. ಜಿ ಶಂಕರ್ ಯವರ ಉಪಸ್ಥಿತಿಯಲ್ಲಿ ನಡೆಯಿತು.
ಉಪಾಧ್ಯಕ್ಷರಾಗಿ ಶ್ರೀಮತಿ ಗುಲಾಬಿ ,ಪ್ರಧಾನ ಕಾರ್ಯದರ್ಶಿಯಾಗಿ ರವೀಶ ತೆಕ್ಕೆಟ್ಟೆ, ಕೋಶಾಧಿಕಾರಿಯಾಗಿ ರವಿರಾಜ ಕಳವಾಡಿ ಆಯ್ಕೆಯಾಗಿದ್ದಾರೆ.
ಈ ಸಂಧರ್ಭದಲ್ಲಿ ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶಿವರಾಮ್ ಕೋಟ, ನಿಕಟಪೂರ್ವ ಅಧ್ಯಕ್ಷ ವಿನಯ್ ಕರ್ಕೇರ ,ಸ್ಥಾಪಕಧ್ಯಕ್ಷ ಸತೀಶ್ ಅಮೀನ್ , ಮೊಗವೀರ ಮಹಾಜನ ಸೇವಾ ಸಂಘ ಉಚ್ಚಿಲ ಇದರ ಅಧ್ಯಕ್ಷರಾದ ಜಯ.ಸಿ .ಕೋಟ್ಯಾನ್, ಕೋಶಾಧಿಕಾರಿ ಪಾಂಡುರಂಗ ಬೈಂದೂರು ಹಾಗೂ ಸಂಘಟನೆಯ ಸದಸ್ಯರುಗಳು ಉಪಸ್ಥಿತರಿದ್ದರು.













