ಮೂಡ್ಲಕಟ್ಟೆ( ಜ.26): ಭಾರತದ ಚುನಾವಣಾ ಆಯೋಗದ ಸಂಸ್ಥಾಪನಾ ದಿನವನ್ನು ಗುರುತಿಸುವ ಹಾಗೂ ಹೊಸ ಮತದಾರರನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಜ .25 ರಂದು ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕಾಲೇಜಿನ ಎಲ್ಲಾ ವಿಭಾಗದ ವಿಧ್ಯಾರ್ಥಿಗಳಿಗೆ ಆಯಾ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಪ್ರತಿಜ್ಞಾ ವಿಧಿ ಬೋಧಿಸಿದರು.