ಕಟ್ಟ್ ಬೆಲ್ತೂರು(ಜ.29): ಇಲ್ಲಿನ ಸುಳ್ಸೆ ಗ್ರಾಮದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ, ಹೊಸ ಮತದಾರರಿಗೆ ಗುರುತಿನ ಚೀಟಿ ನೀಡಿ ಮತದಾರರ ಆದ್ಯ ಕರ್ತವ್ಯ ಮತ್ತು ರೀತಿ ನೀತಿ ನಿಯಮಗಳನ್ನು ಪ್ರತಿಜ್ಞಾ ವಿಧಿಯನ್ನು ಭೋಧಿಸುವ ಮೂಲಕ ತಿಳಿಸಲಾಯಿತು.
ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ ಜನಾಂಗ ಜಾತಿ ಮತ ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ ಎಂದು ಗ್ರಾಮಸ್ಥರು ಪ್ರತಿಜ್ಞೆ ಸ್ವೀಕರಿಸಿದರು.
ಸುಳ್ಸೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕಿಯರು ಅಂಗನವಾಡಿ ಶಿಕ್ಷಕಿ ,ಸಹಾಯಕಿಯರು ಅಡುಗೆ ಸಿಬ್ಬಂದಿ ಸಹಾಯಕರು ಹಾಗೂ ಯುವ ಪತ್ರಕರ್ತ ಈಶ್ವರ್ ಸಿ ನಾವುoದ ಉಪಸ್ಥಿತರಿದ್ದು, ಹೊಸ ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ವಿತರಿಸಲಾಯಿತು .