ಶಿರ್ವ(ಜ.29):73 ನೇ ಗಣರಾಜ್ಯೋತ್ಸವ ದಿನದಂದು ಶಿರ್ವ-ಮಂಚಕಲ್ ಲಯನ್ಸ್ ಕ್ಲಬ್ ಹಾಗೂ ಶಿರ್ವ ಸಂತ ಮೇರಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ರೆಂಜರ್ಸ್ ಮತ್ತು ರೋವರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ ಶಿರ್ವದ ಪ್ರವಾಸಿ ಮಂದಿರ ವಠಾರವನ್ನು ಸ್ವಚ್ಛಗೊಳಿಸುವ “ಶ್ರಮದಾನ” ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಾ.ಹೆರಾಲ್ಡ್ ಐವನ್ ಮೋನಿಸ್,ಅಲ್ಲದೆ ಪ್ರಾದ್ಯಾಪಕರುಗಳಾದ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ಕುಮಾರ್,ಎನ್ ಎಸ್ ಎಸ್ ಯೋಜನಾಧಿಕಾರಿ ಶ್ರೀ ಪ್ರೇಮನಾಥ್, ಕು. ರಕ್ಷಾ , ರೋವರ್ಸ್ ಸ್ಕೌಟ್ ಲೀಡರ್ ಪ್ರಕಾಶ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಕು.ಯಶೋದಾರವರು ಸ್ವತಃಹಾ ಭಾಗವಹಿಸಿದ್ದು, ವಿದ್ಯಾರ್ಥಿಗಳು ಪರಿಸರವನ್ನು ಸ್ವಚ ಗೊಳಿಸಿದರು.
ಕ್ಯಾಡೆಟ್ ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ಜೂನಿಯರ್ ಅಂಡರ್ ಆಫೀಸರ್ ಹರ್ಷಿತ, ಸುರಕ್ಷ , ಕಂಪನಿ ಸಾರ್ಜೆಂಟ್ ಕ್ವಾಟರ್ಮಸ್ಟರ್ ಮೋಹಿತ್ ಎನ್ ಸಾಲಿಯಾನ್, ಕಾರ್ಪೊರಲ್ ಧೀರಜ್ ಆಚಾರ್ಯ, ಲ್ಲ್ಯಾನ್ಸ್ ಕಾರ್ಪೊರಲ್ ಲೋಬೋ ಆನ್ ರಿಯಾ ನೇವಿಲ್,ಎನ್ಎಸ್ಎಸ್ ಸ್ವಯಂಸೇವಕರು- ವೈಷ್ಣವಿ, ಮಿನಾಜ್, ಸಿಂಚನಾ, ಶ್ರೇಯಸ್, ಮೊಹಮ್ಮದ್ ಅಫ್ನಾನ್, ರೋವರ್ ಸ್ವಯಂಸೇವಕ – ಡಾರಿಲ್, ಜಾನ್ಸಿ ಸಹಕರಿಸಿದ್ದರು. ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸಿ ಪರಿಸರವನ್ನು ಸ್ವಚ್ಛಗೊಳಿಸಿದರು.
ಕಾರ್ಯಕ್ರಮದಲ್ಲಿ ಶಿರ್ವ- ಮಂಚಕಲ್ ಲಯನ್ಸ್ ಕ್ಲಬಿನ ಅಧ್ಯಕ್ಷ ಅನಿಲ್ ಡಿ’ಸೋಜ ಕಾರ್ಯದರ್ಶಿ ಚಾರ್ಲ್ಸ್ ಮೋಹನ್ ನೊರೊನ್ಹ ಹಾಗೂ ಕ್ಲಬ್ಬಿನ ಸದಸ್ಯರು ಭಾಗವಹಿಸಿದ್ದರು. ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ರಾಮರಾಯ ಪಾಟ್ಕರ್ ಭಾಗವಹಿಸಿ ಗ್ರಾಮದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳು ಕೈ ಜೋಡಿಸಬೇಕೆಂದು ಕರೆಯಿತ್ತು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು. ಶಿರ್ವ ಗ್ರಾಮ ಪಂಚಾಯತ್ ಸದಸ್ಯ ನ್ಯಾಯವಾದಿ ವಿಲ್ಸನ್ ರೋಡ್ರಿಗಸ್ ರವರು ಕಾರ್ಯಕ್ರಮದ ಮೇಲ್ವಿಚಾರಿಕೆಯನ್ನು ವಹಿಸಿದ್ದರು.