ಕೋಟ(ಫೆ.1): ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಗಣೇಶ ಗಂಗೊಳ್ಳಿ ಹಾಗೂ ಬಳಗದವರ ಸಹಯೋಗದೊಂದಿಗೆ ಜಾನಪದ ಹಾಡು ಹಾಗೂ ನಾಟಕದ ಮೂಲಕ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು, ಯೋಜನೆಗಳು ಮತ್ತು ಸಾಂಕ್ರಾಮಿಕ ರೋಗದ ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಪೇತ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ ಆರೂರಿನಲ್ಲಿ ಫೆ.1 ರಂದು ಹಮ್ಮಿಕೊಳ್ಳಲಾಯಿತು.
ಈ ಆರೋಗ್ಯ ಮಾಹಿತಿ ಜಾಗೃತಿ ಕಾರ್ಯಕ್ರಮಕ್ಕೆ ಆರೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀ ಗುರುರಾಜ ರಾವ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಶಾಲೆಯ ಪ್ರಾಂಶುಪಾಲರಾದ ಗಣೇಶ್, ವಾರ್ಡನ್ ಶ್ರೀಧರ್ ಶೆಟ್ಟಿ,ಯೂಸುಫ್ ಸೈಯದ್, ಆರೋಗ್ಯ ನಿರೀಕ್ಷಣಾ ಅಧಿಕಾರಿ ಸಂತೋಷ್, ಆರೋಗ್ಯ ಸುರಕ್ಷತಾ ಅಧಿಕಾರಿ ಸುಕಂತಿ. ಡಾ.ಗಣೇಶ್ ಗಂಗೊಳ್ಳಿ ಹಾಗೂ ಬಳಗ,ಶಾಲಾ ಪ್ರಾಧ್ಯಾಪಕ ವೃಂದ ಹಾಗೂ ಆಶಾ ಕಾರ್ಯಕರ್ತೆ ರೇವತಿ ಉಪಸ್ಥಿತರಿದ್ದರು.