ಮಾರಣಕಟ್ಟೆ, (ಫೆಬ್ರವರಿ 13) : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ 2021- 22 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಫೆ.12ರಂದು ಶ್ರೀ ಕ್ಷೇತ್ರ ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಜರಗಿತು.
ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಮಾರಣಕಟ್ಟೆ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಸದಾಶಿವ ಶೆಟ್ಟಿ ಯವರು ದೀಪ ಪ್ರಜ್ವಲಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಮನೋಭಾವನೆ ಬೆಳೆಸುವಲ್ಲಿ ಏನ್.ಎಸ್ ಎಸ್.ನ ಪಾತ್ರ ಪ್ರಮುಖವಾದದ್ದು, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಹೆಚ್ಚಾಗಬೇಕು ಎಂದು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ|ಅತುಲ್ ಕುಮಾರ್ ಶೆಟ್ಟಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಯಲ್ಲಿ ಭಾಗವಹಿಸಿ ಜೀವನ ಕೌಶಲ್ಯ ಹಾಗೂ ವ್ಯಕ್ತಿತ್ವ ವಿಕಸನವನ್ನು ಬೆಳೆಸಿಕೊಳ್ಳಬೇಕು. ಅದರ ಸಂಪೂರ್ಣ ಫಲಾನುಫಲಗಳನ್ನು ವಿದ್ಯಾರ್ಥಿಗಳು ಪಡೆದುಕೊಂಡು ಜೀವನದಲ್ಲಿ ರೂಡಿಸಿಕೊಂಡು ಯಶಸ್ವಿಯಾಗಬೇಕು. ಜ್ಞಾನ ಸಂಪಾದನೆ ಮಾಡಿದರೆ ಮಾತ್ರ ಇತಿಹಾಸದಲ್ಲಿ ತಮ್ಮ ಹೆಸರನ್ನು ಅಚ್ಚಳಿಯದಂತೆ ಉಳಿಸಿಕೊಳ್ಳಲು ಸಾಧ್ಯ ಎಂದು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಚಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಪೂಜಾರಿ, ಪಂಚಾಯತ್ ಸದಸ್ಯ ರವಿರಾಜ್ ಶೆಟ್ಟಿ, ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಸುದೀಪ್ ಶೆಟ್ಟಿ ಆಜ್ರಿ ಉಪಸ್ಥಿತರಿದ್ದರು.
ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಆಶಯದ ಮಾತುಗಳನ್ನಾಡಿದರು. ಎನ್.ಎಸ್.ಎಸ್.ಘಟಕದ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ರೇಷ್ಮಾ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ಪ್ರಥ್ವಿಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ಸಂಪತ್ ಶೆಟ್ಟಿ ಹಾಗೂ ಅನುಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೋಧಕ -ಬೋಧಕೇತರ ವೃಂದದವರು ಹಾಗೂ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.