ಕುಂದಾಪುರ (ಫೆ.25): ಡಾ| ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಕನ್ನಡ ವಿಭಾಗದ ಆಯೋಜನೆಯಲ್ಲಿ ಮಾತೃ ಭಾಷಾ ದಿನಾಚರಣೆಯನ್ನು ಫೆ.25 ರಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶ್ರೀ ಕ್ರಷ್ಣಮೂರ್ತಿ ಡಿ.ಬಿ ಮಾತನಾಡಿ ಸಂಸ್ಕೃತಿ ,ಸಂಪ್ರದಾಯ, ಆಚರಣೆಗಳು ಮರೆಯಾದಂತೆ ಭಾಷೆಯ ಪದಗಳು ಮರೆಯಾಗುತ್ತದೆ . ಆ ನಿಟ್ಟಿನಲ್ಲಿ ನಮ್ಮ ಮಾತೃಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರೋ.ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಹಾಗೂ ವಿಭಾಗದ ಮುಖ್ಯಸ್ಥ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕನ್ನಡ ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ಪ್ರವೀಣ ಮಹಾಬಲ ಪೂಜಾರಿ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಸುಕುಮಾರ ಶೆಟ್ಟಿ ಕಮಲಶಿಲೆ ವಂದಿಸಿದರು ಉಪನ್ಯಾಸಕಿ ರೇಣುಕಾ ಕೆ ಕಾರ್ಯಕ್ರಮವನ್ನು ನಿರೂಪಿಸಿದರು. ಬೋಧಕ -ಬೋಧಕೇತರ ವ್ರಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.










