ಕುಂದಾಪುರ (ಮಾ.3): ಮಂಗಳೂರು ವಿಶ್ವವಿದ್ಯಾಲಯ,ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ,ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ರಾಷ್ಟ್ರೀಯ ಸೇವಾ ಯೋಜನಾ ಘಟಕ,ರೆಡ್ ರಿಬ್ಬನ್ ಕ್ಲಬ್,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣ,ರೋಟರಿ ಕ್ಲಬ್ ಶಂಕರನಾರಾಯಣ,ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಕಿರುಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ಇತ್ತೀಚಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣದಲ್ಲಿ ಹಮ್ಮಿಕೊಳ್ಳಲಾಯಿತು.
ಡಾ. ಬಿ.ಬಿ ಹೆಗ್ಡೆ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳಿಗೆ ರಚಿಸಿದ ಅರಿವು ಕಿರುಚಿತ್ರಕ್ಕೆ ಪ್ರಥಮ ಸ್ಥಾನವನ್ನು ನೀಡಿ ಗೌರವಿಸಲಾಯಿತು.ದ್ವೀತಿಯ ಸ್ಥಾನವನ್ನು ಮಂಜುನಾಥ ಪೈ ಮೆಮೋರಿಯಲ್ ಕಾಲೇಜು,ಕಾರ್ಕಳ ಹಾಗೂ ತ್ರತೀಯ ಸ್ಥಾನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡ್ಕ ಪಡೆದುಕೊಂಡಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಾಗಭೂಷಣ್ ಉಡುಪ, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಹಾಗೂ ತಾಲೂಕು ಆಸ್ಪತ್ರೆಯ ವೈದ್ಯರಾದ ಡಾ.ರಾಜೇಶ್ವರಿ, ಕಾಲೇಜು ಪ್ರಾಂಶಪಾಲರು ಹಾಗೂ ರೋಟರಿ ಕ್ಲಬ್ ನ ಗಣ್ಯರು ಉಪಸ್ಥಿತರಿದ್ದರು.