ಕುಂದಾಪುರ (ಮಾ.6) : ಇಲ್ಲಿನ ಡಾ|. ಬಿ. ಬಿ. ಹೆಗ್ದೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ʼರಾಷ್ಟ್ರೀಯ ವಿಜ್ಞಾನ ದಿನʼ ಕಾರ್ಯಕ್ರಮ ಮಾರ್ಚ್ 3 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದರ ಪ್ರಾಂಶುಪಾಲರಾದ ವಿಘ್ನೇಶ್ವರ ಭಟ್ ರವರು ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ ಹಾಗೂ ಬಿ.ಎಸ್.ಸಿ ಪದವಿಯ ನಂತರದ ಉದ್ಯೋಗಾವಕಾಶಗಳನ್ನು ವಿದ್ಯಾರ್ಥಿ ಗಳಿಗೆ ವಿವರಿಸಿದರು.
ಪ್ರಾಂಶುಪಾಲರಾದ ಫ್ರೋ. ಕೆ. ಉಮೆಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕಿ ನಿರುಷಾ ಶೆಟ್ಟಿ ಉಪಸ್ಥಿತರಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಚೈತ್ರಾ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಶುಭ ಅಡಿಗ ವಿಜೇತರ ಪಟ್ಟಿಯನ್ನು ವಾಚಿಸಿದರು.
ತೃತೀಯ ಬಿ.ಎಸ್.ಸಿ ವಿದ್ಯಾರ್ಥಿಗಳಾದ ಅಕ್ಷಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಭೂಮಿಕ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿ, ಶ್ವೇತ ವಂದಿಸಿದರು.