ಕೆರಾಡಿ(ಮಾ.20): ಇಲ್ಲಿನ ವರಸಿದ್ಧಿ ವಿನಾಯಕ ಪಿ.ಯು ಕಾಲೇಜಿನ 2021 – 2022 ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಮಾ.17 ರಂದು ಕಾಲೇಜಿನ ಕ್ರಷ್ಣಮ್ಮ ಸಭಾಭವನದಲ್ಲಿ ಜರುಗಿತು.
ಕಾಲೇಜಿನ ಸಂಸ್ಥಾಪಕರಾದ ಶ್ರೀ ಕೆರಾಡಿ ಚಂದ್ರಶೇಖರ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿಗಳು ಎರಡು ವರ್ಷದ ತಮ್ಮ ಕಾಲೇಜು ಜೀವನದ ಅನುಭವ ಅನಿಸಿಕೆಗಳನ್ನು ಹಂಚಿಕೊಂಡರು. ತದನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ಆರ್. ಉಪ ಪ್ರಾಂಶುಪಾಲರಾದ ಅರುಣ್ ಕುಮಾರ್, CEO ರಾಮಚಂದ್ರ ಹಾಗೂ ತರಗತಿಯ ಉಪನ್ಯಾಸಕರು ಉಪಸ್ಥಿತರಿದ್ದರು.
ಉಪನ್ಯಾಸಕಿ ನೇಹಾ ಶೆಟ್ಟಿ ಕಾರ್ಯಕ್ರಮವನ್ನು ಸಂಯೋಜಿಸಿದರು.ಉಪನ್ಯಾಸಕ ಅಭಿಜಿತ್ ಹೆಮ್ಮಾಡಿ ಹಾಗೂ ವಿದ್ಯಾರ್ಥಿನಿ ಮನಸ್ವಿ ಕಾರ್ಯಕ್ರಮ ನಿರೂಪಿಸಿದರು.ವಿದ್ಯಾರ್ಥಿನಿ ಭೂಮಿಕಾ ಸ್ವಾಗತಿಸಿ, ಭಾಗ್ಯಶ್ರೀ ಧನ್ಯವಾದಗೈದರು.