ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಂಗಳೂರು, ಗ್ರಾಮ ಪಂಚಾಯತ್ ಕೋಟೇಶ್ವರ ಆಶ್ರಯದಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಮಾರ್ಚ್ 31 ರಂದು ಬೆಳಿಗ್ಗೆ 11 ಗಂಟೆಗೆ ಕೋಟೇಶ್ವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೃಷ್ಣ ಗೊಲ್ಲ ಮಾತನಾಡಿ ಗ್ರಾಮೀಣ ಭಾಗದಲ್ಲಿ ವಿಶೇಷ ಚೇತನರನ್ನ ಗುರುತಿಸಿ ಎಪಿಡಿ ಸಂಸ್ಥೆ ಉತ್ತಮ ತರಬೇತಿ ನೀಡಿ ವಿಶೇಷ ಚೇತನರಿಗೆ ಉತ್ತಮ ಭವಿಷ್ಯವನ್ನು ಕಟ್ಟಿಕೊಡುವ ಪ್ರಯತ್ನ ಅವಿಸ್ಮರಣೀಯ. ಹಾಗೆಯೇ ವಿಶೇಷ ಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರು.
ಸಂಸ್ಥೆಯ ಪ್ರತಿನಿಧಿ ಶ್ರೀ ಆಕಾಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಪಿಡಿ ಸಂಸ್ಥೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಮಾಹಿತಿ ನೀಡಿ , ನಾವು ಈಗಾಗಲೇ ಗ್ರಾಮೀಣ ಪ್ರದೇಶದ ವಿಶೇಷ ಚೇತನರನ್ನ ಗುರುತಿಸಿ ಸಂಸ್ಥೆಯಿಂದ ತರಬೇತಿ ನೀಡುತ್ತಿದ್ದೇವೆ, ಶಿಬಿರಾರ್ಥಿಗಳಿಗೆ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ದಿನೇಶ್ ಮಾತನಾಡಿ, ವಿಶೇಷ ಚೇತನರಲಿ ಸಾಕಷ್ಟು ಪ್ರತಿಭೆಗಳಿವೆ ಅದರ ಸದ್ಬಳಕೆ ಮತ್ತು ಪ್ರಯೋಜನ ಎಪಿಡಿ ಸಂಸ್ಥೆಯ ಮೂಲಕ ಆಗಲೆಂದು ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಲೋಕೇಶ್ ಅಂಕದಕಟ್ಟೆ, ಸಂಪನ್ಮೂಲ ವ್ಯಕ್ತಿ ಶ್ರೀಮತಿ ಲಿಖಿತಾ , ಶಿಬಿರಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು VRW ಶ್ರೀ ಶಶಿಧರ ನಿರೂಪಿಸಿ, ಸ್ವಾಗತಿಸಿದರು.VRW ಶ್ರೀ ಕೃಷ್ಣ ಪೂಜಾರಿ ವಂದಿಸಿದರು.